ಮಲೆನಾಡಿನಲ್ಲಿ ಮತ್ತೊಂದು ಕಾರು ಅಪಘಾತ: ಕಾರಿನಲ್ಲಿದ್ದವರನ್ನು ರಕ್ಷಿಸಿದ ಸಮಾಜಸೇವಕ ಆರೀಫ್

ಭಾಸ್ಕರ ಪತ್ರಿಕೆ
0

ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿ ಮಳೆ ಹಿನ್ನೆಲೆ ಮತ್ತೊಂದು ಕಾರು ಅಪಘಾತಕ್ಕೀಡಾಗಿದೆ.

ಕಾರು ಪಲ್ಟಿಯಾಗಿ ಹೇಮಾವತಿ ನದಿಯ ಉಪನದಿಯ ಹಳ್ಳಕ್ಕೆ ಬಿದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ನಡೆದಿದೆ.

ಸಮಾಜ ಸೇವಕ ಆರೀಫ್  ಸೊಂಟಕ್ಕೆ ಹಗ್ಗ ಕಟ್ಟಿ ಹಳ್ಳಕ್ಕೆ ಇಳಿದು ಕಾರಿನಲ್ಲಿದ್ದವರ ರಕ್ಷಣೆ ಮಾಡಿದ್ದಾರೆ. ಭಾರೀ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಣಕಲ್‌ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ಪ್ರಕರಣ ದಾಖಲಾಗಿದೆ. ಇನ್ನೂ ಯಾವುದೇ ಅಪಘಾತಗಳು ನಡೆದರೂ ಆಪ್ತ ರಕ್ಷರಂತೆ ಆಗಮಿಸುವ ಸಮಾಜ ಸೇವಕ ಆರೀಫ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*