ಒಂಟಿ ಮಹಿಳೆಯ ಬರ್ಬರ ಹತ್ಯೆ: ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಭಾಸ್ಕರ ಪತ್ರಿಕೆ
0

ಬೆಂಗಳೂರು: ಒಂಟಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆ ದರ್ಗಾ ರಸ್ತೆಯಲ್ಲಿ ನಡೆದಿದೆ.

ಲತಾ(40) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮಹಿಳೆಯ ಪತಿ ಹೋಲ್ ಸೇಲ್ ಬಟ್ಟೆ ವ್ಯಾಪಾರಿಯಾಗಿದ್ದು. ಲತಾ ಅವರ ಮಗಳು ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಲತಾ ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಂದರ್ಭದಲ್ಲಿ ನುಗ್ಗಿದ ದರೋಡೆಕೋರರು ಲತಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಹಂತಕರು ಪರಾರಿಯಾಗಿದ್ದಾರೆ.

ವರದಿಗಳ ಪ್ರಕಾರ ಮಹಿಳೆಯ ಪತಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದ್ದು.ತಕ್ಷಣ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧ್ಯಾಹ್ನ 12 ಗಂಟೆ ವೇಳೆಗೆ ಕೊಲೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*