ತುಮಕೂರು:  ಕಾರ್ಖಾನೆಯಲ್ಲಿ ಇಬ್ಬರು ಕಾರ್ಮಿಕರ ಸಾವು, ಅಸ್ವಸ್ಥ ಪ್ರಕರಣ:  ಮಾಲೀಕರ ವಿರುದ್ಧ ಪ್ರಕರಣ

ಭಾಸ್ಕರ ಪತ್ರಿಕೆ
0

ತುಮಕೂರು:  ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಲಾರಸ್ ಬಯೋ   ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟಕದ ಮಾಲೀಕರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ ತಿಳಿಸಿದ್ದಾರೆ.

ಘಟಕದ ಸಂಪ್ ನಲ್ಲಿ ಉಸಿರುಕಟ್ಟಿ ಪ್ರತಾಪ್ ( 23), ವೆಂಕಟೇಶ್(32) ಮೃತ ಪಟ್ಟಿದ್ದರು. ಶಿರಾದ ರೂರು ಗ್ರಾಮದ ಮಂಜುನಾಥ್(42),  ಯುವರಾಜ್ (32) ಅಸ್ವಸ್ಥಗೊಂಡಿದ್ದರು. ಮೃತಪಟ್ಟವರನ್ನು ಹಾಗೂ ಅಸ್ವಸ್ಥಗೊಂಡವರನ್ನು ಕಾರ್ಖಾನೆಯ ಸಿಬ್ಬಂದಿಗಳೇ ಪ್ರಥಮ ಚಿಕಿತ್ಸೆ ಕೊಡಿಸಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಪ್ರತಾಪ್ ಮತ್ತು ವೆಂಕಟೇಶ್ ಅವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಸರ್ಕಾರ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ್ದರು ಎಂದು ಹೇಳಿದ್ದಾರೆ.

ಈ ಪ್ರಕರಣದ ಸಂಬಂಧ ಕಾರ್ಖಾನೆಯ ಸಿಬ್ಬಂದಿ ಹಾಗೂ ಮಾಲೀಕರ ವಿರುದ್ಧ ಕೋರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*