ಆಯಿಲ್ ಗೋದಾಮಿಗೆ ಬೆಂಕಿ: 30 ಕೋಟಿ ಮೌಲ್ಯದ ಆಯಿಲ್ ಬೆಂಕಿಗಾಹುತಿ

ಭಾಸ್ಕರ ಪತ್ರಿಕೆ
0

ನೆಲಮಂಗಲ: ಆಯಿಲ್ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಈ ಘಟನೆ ನಡೆದಿದೆ.

ಬೆಳಗಿನ ಜಾವ ಮೂರು ಗಂಟೆಯ ವೇಳೆ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡು ಉರಿದಿದ್ದು, . ನೆಲಮಂಗಲ, ಪೀಣ್ಯಾ, ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡ ಘಟನಾ ಸ್ಥಳದಲ್ಲಿ ಬೆಂಕಿ ನಂದಿರುವ ಕಾರ್ಯ ನಡೆಸುತ್ತಿದೆ.

ಭಾರತ-ಪಾಕಿಸ್ತಾನ ನಡುವಿನ ಯುದ್ಧ ಆರಂಭ ಹಿನ್ನೆಲೆ ಹೆಚ್ಚಿನ ಸ್ಟಾಕ್ ಶೇಖರಣೆ ಮಾಡಲಾಗಿತ್ತು. ಯುದ್ಧದ ಪರಿಣಾಮವಾಗಿ ಕಂಪನಿ ಸಾಕಷ್ಟು ಪ್ರಮಾಣದಲ್ಲಿ ಆಯಿಲ್ ಶೇಖರಣೆ ಮಾಡಿತ್ತು ಎಂದು ಹೇಳಲಾಗಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸರಿಸುಮಾರು 30 ಕೋಟಿ ರೂಪಾಯಿ ಮೌಲ್ಯದ ಆಯಿಲ್ ಬೆಂಕಿಗಾಹುತಿ ಆಗಿರಬಹುದು ಎಂದು ಅಂದಾಜಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*