ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿಯ ಹತ್ಯೆ ಹಿನ್ನೆಲೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2ರಿಂದ 6ರವರೆಗೆ ಸೆಕ್ಷನ್ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆಗಳು ನಡೆಯದಂತೆ ಈ ಆದೇಶ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ನಿಷೇಧಿಸಲಾಗಿದೆ.
5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಮೇ 2ರ ಬೆಳಿಗ್ಗೆ 6ರಿಂದ ಮೇ ಮೇ 6ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ.

