ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಡೆಸಿರುವ ದಾಳಿ, ಶೋಧ ಕಾರ್ಯಾಚರಣೆ ಗುರುವಾರವೂ ಮುಂದುವರಿದಿದೆ.
ದಾಳಿ ನಡೆದು 24 ಗಂಟೆ ನಡೆದರೂ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿಸಲಾಗಿದೆ. ವರದಿಗಳ ಪ್ರಕಾರ ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಪ್ರಕರಣ ಹಿನ್ನೆಲೆ ದಾಳಿ ನಡೆಸಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ.
ನಟಿ ರನ್ಯಾ ರಾವ್ ಖಾತೆಗೆ 40 ಲಕ್ಷ ರೂಪಾಯಿ ವರ್ಗಾವಣೆ ಮಾಡಿರುವ ಆರೋಪದ ಮೇಲೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದೆ ಎಂದು ವರದಿಯಾಗಿದೆ. ಆದರೆ ಇದರ ಸತ್ಯಾಸತ್ಯತೆ ಇನ್ನೂ ತಿಳಿದು ಬಂದಿಲ್ಲ.
ಪ್ರಭಾವಿ ವ್ಯಕ್ತಿಯೊಬ್ಬರ ಸೂಚನೆ ಮೇರೆಗೆ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಟ್ರಸ್ಟ್ ಮೂಲಕ ರನ್ಯಾ ರಾವ್ ಕ್ರೆಡಿಟ್ ಕಾರ್ಡ್‌ಗೆ 40 ಲಕ್ಷ ರೂಪಾಯಿ ವರ್ಗಾವಣೆ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ. ಈ ಆಧಾರದಲ್ಲಿ ಒಟ್ಟು 16 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ತುಮಕೂರಿನ ಕುಣಿಗಲ್ ರಸ್ತೆಯ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜು, ಹೆಗ್ಗೆರೆ ಸಮೀಪದ ಸಿದ್ಧಾರ್ಥ ಮೆಡಿಕಲ್ ಕಾಲೇಜು, ಕ್ಯಾತ್ಸಂದ್ರದ ಹೊಸ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು, ಈ ಮೂರು ಕಡೆ ಶೋಧ ಕಾರ್ಯಾಚರಣೆ ಭರದಿಂದ ಸಾಗಿದೆ.
from Mahanayaka https://ift.tt/f3FYp18

