ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

ಭಾಸ್ಕರ ಪತ್ರಿಕೆ
0

ಇಸ್ಲಾಮಾಬಾದ್: ಇಂದು ಶನಿವಾರ ಮುಂಜಾನೆ ಪಾಕಿಸ್ತಾನದ ಮೂರು ವಾಯುನೆಲೆಗಳ ಮೇಲೆ ಭಾರತೀಯ ಕ್ಷಿಪಣಿ ಮತ್ತು ಡ್ರೋನ್ ಗಳು ಗುರಿಯಾಗಿಸಿ ದಾಳಿ ನಡೆಸಿವೆ.

ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಇಸ್ಲಾಮಾಬಾದ್ ನಲ್ಲಿ ಆತುರದಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು.
ಪಾಕಿಸ್ತಾನ ವಾಯುಪಡೆಯ ನೂರ್ ಖಾನ್ (ಚಕ್ಲಾಲಾ, ರಾವಲ್ಪಿಂಡಿ), ಮುರಿಯ್ (ಚಕ್ವಾಲ್) ಮತ್ತು ರಫೀಕಿ (ಜಾಂಗ್ ಜಿಲ್ಲೆಯ ಶೋರ್ಕೋಟ್) ವಾಯುನೆಲೆಗಳನ್ನು ಭಾರತ ಗುರಿಯಾಗಿಸಿ ದಾಳಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ವಾಯುಪಡೆಯ ಎಲ್ಲಾ ಸ್ವತ್ತುಗಳು ಸುರಕ್ಷಿತವಾಗಿವೆ ಎಂದು ಅವರು ಹೇಳಿದ್ದಾರೆ. ಭಾರತವು ತನ್ನ ಜೆಟ್ ಮೂಲಕ ಗಾಳಿಯಿಂದ ಮೇಲ್ಮೈಗೆ ಕ್ಷಿಪಣಿಗಳನ್ನು ಹಾರಿಸಿದೆ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಯು ಹಲವಾರು ಕ್ಷಿಪಣಿಗಳನ್ನು ತಡೆಹಿಡಿದಿದೆ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೆ ಆತುರಾತುರವಾಗಿ ಪತ್ರಿಕಾಗೋಷ್ಠಿ ಮುಗಿಸಿ ಅವರು ತೆರಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*