ತುಮಕೂರು: ನಗರ ಪೊಲೀಸ್ ಠಾಣೆ ಆವರಣದಲ್ಲಿ ಮಾಲೀಕರು ಪತ್ತೆಯಾಗದ 7 ದ್ವಿಚಕ್ರ ವಾಹನಗಳನ್ನು ಮೇ 6ರಂದು ಬೆಳಿಗ್ಗೆ 10:30 ಗಂಟೆಗೆ ಸಾರ್ವಜನಿಕವಾಗಿ ಬಹಿರಂಗ ಹರಾಜು ಮಾಡಲಾಗುವುದು.
ಹರಾಜನ್ನು ತುಮಕೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಸಮಕ್ಷಮದಲ್ಲಿ ನಡೆಸಲಾಗುತ್ತಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

