ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ.
ಮೇ 7 ರ ನಸುಕಿನಲ್ಲಿ ದೇಶಾದ್ಯಂತ ಯುದ್ಧ ಸಿದ್ಧತೆ ಅಣಕು ಕವಾಯತು ನಡೆಸುವ ಬಗ್ಗೆ ಘೋಷಣೆಯಾಗಿದ್ದು, ಆ ಸಂದರ್ಭದಲ್ಲೇ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರದ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಹಿಡಿತದಲ್ಲಿರುವ ಮೂರು ಸ್ಥಳಗಳ ಭಾರತೀಯ ಸೇನೆ ಕ್ಷಿಪಣಿಗಳ ದಾಳಿ ಮಾಡಿದೆ.
ಪಾಕಿಸ್ತಾನಿ ಮಿಲಿಟರಿ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಇಲ್ಲಿಯವರೆಗೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
![]() |
| ಡಾ.ಭಾಸ್ಕರ್ |
ಪ್ರಧಾನ ಮಂತ್ರಿ ಮೋದಿಜಿಯವರ ಈ ಕಾರ್ಯಕ್ಕೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆಗೆ ತಿಪಟೂರಿನ ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಭಾಸ್ಕರ್ ಅಭಿನಂದನೆ ಸಲ್ಲಿಸಿ ಭಾಸ್ಕರ ಪತ್ರಿಕೆಯ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.


