ಭಾರತ– ಪಾಕಿಸ್ತಾನ ನಡುವೆ ಉದ್ವಿಗ್ನ: ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಭಾಸ್ಕರ ಪತ್ರಿಕೆ
0

ಮಂಡ್ಯ: ಆಪರೇಷನ್ ಸಿಂಧೂರ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಾದ್ಯಂತ ಎಚ್ಚರಿಕೆ ನೀಡಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ.

ಭದ್ರತಾ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ನೀಡಿದ ಸೂಚನೆಗಳನ್ನು ಪಾಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯದ ಅಣೆಕಟ್ಟುಗಳು ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ‘ನಾವು ಎಲ್ಲೆಡೆ ಎಚ್ಚರಿಕೆ ನೀಡಿದ್ದೇವೆ. ಏಕೆಂದರೆ, ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ’ ಎಂದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸ್ಥಳಗಳಲ್ಲಿ ಮಾಕ್ ಡ್ರಿಲ್ ಗಳನ್ನು ನಡೆಸಲಾಗುತ್ತಿದೆ ಮತ್ತು ಕೇಂದ್ರವು ನೀಡಿದ ಸೂಚನೆಗಳನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*