K.S.R.T.C ಬಸ್ ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ: ಇಬ್ಬರು ಯುವಕರ ಸಾವು

ಭಾಸ್ಕರ ಪತ್ರಿಕೆ
0

 


ತಿಪಟೂರು: ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಗಳ ಮಧ್ಯೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ.

ಅಯ್ಯನಬಾವಿಯ ನಿವಾಸಿಗಳಾದ ಉಮೇಶ್ (32), ರಜಿನಿಕಾಂತ್ (33) ಮೃತಪಟ್ಟ ದುದೈವಿಗಳು.
ರಾಷ್ಟಿಯ ಹೆದ್ದಾರಿ 206ರ ಕಸಬಾ ಹೋಬಳಿ ಮತ್ತಿಹಳ್ಳಿ ಗೇಟ್ ಬಳಿ ಸಂಬವಿಸಿದ್ದು ವೇಗವಾಗಿ ಬಂದ ಕೆ.ಎಸ್.ಆರ್.ಟಿ .ಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸ್ಥಳದಲ್ಲಿ ಮೃತಪಟ್ಟಿರುತ್ತಾರೆ.ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕರಾದ ಚಂದ್ರಶೇಖರ್.ಸಬ್ ಇನ್ಪೆಕ್ಟರ್ ನಾಗರಾಜು.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*