ತುಮಕೂರು: ಇಂದು ದೇಶ ವಿದೇಶಗಳಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ತುಮಕೂರು ಜಿಲ್ಲೆಯಲ್ಲೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ತುಮಕೂರು ಜಿಲ್ಲಾಡಳಿತದ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು.
ತುಮಕೂರು ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿ ವರ್ಗ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ, ಯೋಗ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಜರಿದ್ದರು.

