ಬೀದರ್ | ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈ ಜೋಡಿಸಿ : ಎಸ್ಪಿ ಪ್ರದೀಪ್ ಗುಂಟಿ

ಭಾಸ್ಕರ ಪತ್ರಿಕೆ
0

ಬೀದರ್: ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ಉಪವಿಭಾಗದ ವತಿಯಿಂದ ನಗರದ ಕರ್ನಾಟಕ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾದಕ ದ್ರವ್ಯ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದರಿಂದಾಗಿ ವ್ಯಕ್ತಿ ತಾನು ಏನು ಮಾಡುತ್ತಿದ್ದಾನೆ ಎಂಬುವುದರ ಅರಿವು ಕೂಡ ಆತನಿಗೆ ಇರುವುದಿಲ್ಲ. ಇಂತಹ ನಶೆಯಲ್ಲಿ ಇರುವವರು ಕಳ್ಳತನ, ಕೊಲೆ, ದರೋಡೆ, ಲೈಂಗಿಕ ಕಿರುಕುಳದಂಥ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಕೆಟ್ಟ ನಶೆಗಳಿಂದ ದೂರ ಸರಿದು ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಶಿವನಗೌಡ ಪಾಟೀಲ್, ಎಸ್.ಬಿ.ಐ.ನ ಪ್ರಾದೇಶಿಕ ವ್ಯವಸ್ಥಾಪಕ ಜೈಕುಮಾರ್, ಹೆಚ್ಚುವರಿ ಡ್ರಗ್ಸ್ ಕಂಟ್ರೋಲರ್ ಧನಂಜಯ್, ಮನೋರೋಗ ತಜ್ಞ ರಾಘವೇಂದ್ರ ವಾಗ್ನರೆ, ರೈಲ್ವೆ ಪೋಲಿಸ್ ಠಾಣಾಧಿಕಾರಿ ಪಾಷಾ, ಎಎಸ್‌ ಐಆರ್‌ಪಿಎಫ್ ಸಿ.ಎಚ್. ಶ್ರೀನಿವಾಸ್ ಹಾಗೂ ವಕೀಲರು ಮತ್ತು ಮಾಂಗರವಾಡಿ ಸಂಘದ ರಾಜ್ಯಾಧ್ಯಕ್ಷ ಅನೀಲಕುಮಾರ್ ಕಾಂಬ್ಳೆ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*