ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

ಭಾಸ್ಕರ ಪತ್ರಿಕೆ
0

ಅಹಮದಾಬಾದ್: ಏರ್‌ ಇಂಡಿಯಾ ವಿಮಾನ ಪತನಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರತಿಕ್ರಿಯೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅಮಿತ್ ಶಾ,  ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿ ಸುಮಾರು 1.25 ಲಕ್ಷ ಲೀಟರ್ ಇಂಧನವಿತ್ತು. ಮಧ್ಯಾಹ್ನ ಹೆಚ್ಚಿನ ತಾಪಮಾನದಿಂದಾಗಿ ಪ್ರಯಾಣಿಕರನ್ನು ರಕ್ಷಿಸುವ ಅವಕಾಶವಿರಲಿಲ್ಲ ಎಂದು ತಿಳಿಸಿದ್ದಾರೆ.

ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಮತ್ತು ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿಯಾದ ಅವರು ಆರೋಗ್ಯ ವಿಚಾರಿಸಿದರು. ಅಪಘಾತದ ನಡೆದ 10 ನಿಮಿಷಗಳಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ಸಿಕ್ಕಿತು ಎಂದು ಇದೇ ವೇಳೆ ತಿಳಿಸಿದರು.

ನಾನು ಗುಜರಾತ್ ಮುಖ್ಯಮಂತ್ರಿ ಮತ್ತು ನಾಗರಿಕ ವಿಮಾನಯಾನ ಸಚಿವರನ್ನು ಸಂಪರ್ಕಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಸ್ವಲ್ಪ ಸಮಯದಲ್ಲೇ ಕರೆ ಮಾಡಿದ್ದಾರೆ. ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ ಎಂದು ತಿಳಿಸಿದರು.

ದುರಂತ ನಡೆದ ಸ್ಥಳಕ್ಕೆ ನಾನು ಹೋಗಿದ್ದೆ. 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು. ಒಬ್ಬರು ದುರಂತದಿಂದ ಪಾರಾಗಿದ್ದು, ಡಿಎನ್ ಎ ಪರಿಶೀಲನೆಯ ನಂತರ ಸಾವಿನ ಸಂಖ್ಯೆಯನ್ನು ಘೋಷಿಸಲಾಗುವುದು ಎಂದು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*