ಭಾರೀ ಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ ಜಿಲ್ಲೆ: ಅಲ್ಲಲ್ಲಿ ಭೂಕುಸಿತ

ಭಾಸ್ಕರ ಪತ್ರಿಕೆ
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಿವಿಧ ಪ್ರದೇಶಗಳಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಮಂಗಳೂರು ನಗರ ಭಾರೀ ಮಳೆಗೆ ತತ್ತರಿಸಿದೆ.

ನಗರದ ಹೊರವಲಯದ ಪಡೀಲ್ ಮತ್ತು ಜೋಕಟ್ಟೆ ನಡುವಿನ ರೈಲು ಹಳಿ ಮಾರ್ಗದಲ್ಲಿ  ಭೂಕುಸಿತ ಸಂಭವಿಸಿದೆ. ಇದರಿಂದಾಗಿ ರೈಲುಗಳು ನಿಗದಿತ ಸಮಯಕ್ಕಿಂತ ತಡವಾಗಿ ಸಂಚರಿಸಿದೆ.

ಇನ್ನೂ ಮಂಗಳೂರಿನ ಕೆತ್ತಿಕ್ಕಲ್  ಪ್ರದೇಶದಲ್ಲೂ ಭೂಕುಸಿತ ಸಂಭವಿಸಿದೆ. ಕೆತ್ತಿಕ್ಕಲ್ ಮುಖ್ಯರಸ್ತೆಯಲ್ಲಿ ರಾತ್ರಿ 7:30ರ ಸುಮಾರಿಗೆ ಗುಡ್ಡ ಕುಸಿತ ಸಂಭವಿಸಿದ್ದು, ಇದರಿಂದಾಗಿ ವಾಹನ ಸವಾರರು ಪರದಾಡಿದರು. ಇದೀಗ ನಿರಂತರ ಮಳೆ ಮುಂದುವರಿದಿದ್ದು, ಮತ್ತಷ್ಟು ಭೂಕುಸಿತವಾಗುವ ಭೀತಿ ಸೃಷ್ಟಿಸಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಖಡಕ್ ಸೂಚನೆ  ನೀಡಿದ್ದಾರೆ. ಯಾವುದೇ ಸಾವು ನೋವು ಸಂಭವಿಸದಂತೆ ತಕ್ಷಣವೇ ಎಚ್ಚರಿಕಾ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*