ಠುಸ್ ಆಯಿತೇ ಹೇಮಾವತಿ ಹೋರಾಟ?: ಹೋರಾಟ ಸ್ಥಗಿತ!

ಭಾಸ್ಕರ ಪತ್ರಿಕೆ
0

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ವಿರೋಧಿ ಹೋರಾಟವನ್ನು ಕೈಬಿಡುವಂತೆ ಕೇಂದ್ರ ರೈಲ್ವೆ ಖಾತೆ ಸಚಿವ ಸೋಮಣ್ಣ ತಿಳಿಸಿದ್ದು, ಇನ್ನೊಂದು ತಿಂಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ  ಎಂದು  ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ.

ಕೇಂದ್ರ ಸಚಿವ ವಿ ಸೋಮಣ್ಣ ಅವರ ಮೇಲೆ ಸಂಪೂರ್ಣ ನಂಬಿಕೆ ಇಟ್ಟು ಹೋರಾಟವನ್ನು ಸ್ಥಗಿತಗೊಳಿಸಿದ್ದೇವೆ ಎಂದು ಹೇಳಿದ್ದಾರೆ.

ಹೇಮಾವತಿ ನೀರನ್ನು ರಾಮನಗರಕ್ಕೆ ಅಥವಾ ಕುಣಿಗಲ್ ಗೆ  ತೆಗೆದುಕೊಂಡು ಹೋಗಲು ನಮ್ಮ ಯಾವುದೇ ತಕರಾರು ಇಲ್ಲ ಎಂದು ಹೇಳಿದರು.

ಯಾವುದೇ ಜಿಲ್ಲೆಗೂ ಅನ್ಯಾಯವಾಗಬಾರದು ಎಂಬ ಒತ್ತಾಸೆ ನಮ್ಮದಾಗಿದೆ. ಕೇಂದ್ರ ಸಚಿವ ಸೋಮಣ್ಣ ಅವರೊಂದಿಗೂ ಕೂಡ ನಾವು ಇರುತ್ತೇವೆ ಎಂದು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*