ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದೃಢ

ಭಾಸ್ಕರ ಪತ್ರಿಕೆ
0

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 22 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ.

ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಕಾರಣ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಆತನ ಸ್ವಾಬ್ ಸ್ಯಾಂಪಲ್ ತೆಗೆದು, ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಆರೋಗ್ಯ ಇಲಾಖೆಯ ಅಧಿಕೃತ ಹೆಲ್ತ್ ಬುಲೆಟಿನ್ ಪ್ರಕಾರ, ಈ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಯುವಕ ಚಿಕ್ಕಮಗಳೂರು ನಗರದ ನಿವಾಸಿಯಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*