ಭಾರೀ ಪ್ರಮಾಣದ ಭೂ ಕುಸಿತ: ಕುಸಿಯುವ ಭೀತಿಯಲ್ಲಿ ಮನೆ

ಭಾಸ್ಕರ ಪತ್ರಿಕೆ
0

ಚಿಕ್ಕಮಗಳೂರು:  ಮಲೆನಾಡಲ್ಲಿ ಗಾಳಿ–ಮಳೆ ಅಬ್ಬರ ಮುಂದುವರಿದಿದೆ  ಕೊಪ್ಪ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ.

ಕೊಪ್ಪ ತಾಲೂಕಿನ ಹುತ್ತಿನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಸಚಿನ್ ಎಂಬುವರ ಮನೆ ಕುಸಿಯುವ  ಆತಂಕ ಸೃಷ್ಟಿಯಾಗಿದೆ.  ಮನೆ ಪಕ್ಕದಲ್ಲೇ ಧರೆ ಕುಸಿಯುತ್ತಿದ್ದು, ಕುಸಿಯುತ್ತಿರೋ ಪ್ರಮಾಣ ಹೆಚ್ಚಳವಾಗುತ್ತಿದ್ದು, ಮತ್ತಷ್ಟು ಕುಸಿದರೆ ಮನೆಯೇ ಕೊಚ್ಚಿ ಹೋಗುವ ಸಾಧ್ಯತೆ ಇದೆ.

ಭೂಕುಸಿತದ ವಿಷಯ ತಿಳಿಸಿದರೂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಮನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರಂತರ ಮಳೆ–ಗಾಳಿಗೆ ಮಲೆನಾಡು ಹೈರಾಣಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*