ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸುವಂತದ್ದು: ತಹಶೀಲ್ದಾರ್ ಮೋಹನಕುಮಾರಿ

ಭಾಸ್ಕರ ಪತ್ರಿಕೆ
0

ಸರಗೂರು:  ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ, ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸುವಂತದ್ದು’ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ಮೋಹನಕುಮಾರಿ  ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕೆಂಪೇಗೌಡ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರದಂದು ಹಮ್ಮಿಕೊಂಡ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .

ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು. ಎಲ್ಲಾ ಸಮುದಾಯದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ’ ಎಂದರು.

ಧಾರ್ಮಿಕ, ಸಾಂಸ್ಕೃತಿಕ, ಜಾನಪದ ಕಲೆಗಳ ಬೆಳೆವಣಿಗೆ ಜೊತೆಗೆ ಎಲ್ಲಾ ಸಮುದಾಯದವರಿಗೆ ಅಧಿಕಾರ,ಶಿಕ್ಷಣ, ಸವಲತ್ತನ್ನು ನಾಡಪ್ರಭು ಕೆಂಪೇಗೌಡರು ನೀಡಿದ್ದರು’ ಎಂದು ಹೇಳಿದರು.

ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಗ್ರಾಪಂ ಸದಸ್ಯ ಮಾಜಿ ಅಧ್ಯಕ್ಷ ಸುಧೀರ್ ಮಾತನಾಡಿ, ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯುಳ್ಳ ಆಡಳಿತಗಾರನಾಗಿದ್ದು, ಕೆರೆಗಳ ನಿರ್ಮಾಣಗಳ ಮೂಲಕ ಕೃಷಿ ಅಭಿವೃದ್ಧಿ ಹಾಗೂ ಅಂತರ್ಜಲದ ವೃದ್ಧಿಗೆ ಶ್ರಮಿಸಿದವರು. ಪ್ರಕೃತಿ ಸಮತೋಲನ, ನಿಸರ್ಗ ಸಂರಕ್ಷಣೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು’ ಎಂದು ಹೇಳಿದರು.

ಮುಖ್ಯ ಭಾಷಣಕಾರರಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಲಪ್ಪ ಮಾತನಾಡಿ, ನಾಡು ಕಟ್ಟುವಲ್ಲಿ ನಾಡಪ್ರಭು ಕೆಂಪೇಗೌಡ ಪಾತ್ರ ಪ್ರಮುಖ ವಹಿಸಿದ್ದರು ಎಂದರು.

ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ನಗರ ನಿರ್ಮಾಣವಾಯಿತು. ಬೆಂಗಳೂರಿನ ಕೆರೆ ಕಟ್ಟೆಗಳನ್ನೂ ಅವರು ಅಭಿವೃದಿಟಛಿಗೊಳಿಸಿ ಮಾದರಿಯಾಗಿದ್ದಾರೆ ಎಂದರು.

ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ಪಪಂ ಸದಸ್ಯ ಶ್ರೀನಿವಾಸ, ಆದಿಕರ್ನಾಟಕ ಮಹಾಸಭಾದ ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿದರು. ಲಯನ್ಸ್ ಅಕಾಡೆಮಿ ಶಾಲೆಯ ಶಿಕ್ಷಕ ಸುನೀಲ್ ನಿರೂಪಣೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರು ಗಂಗಾಧರ್, ಶಿವಕುಮಾರ್, ಜ್ಯೋತಿ ರಮೇಶ್, ಮಾಜಿ ಗ್ರಾಪಂ ಸದಸ್ಯರು ಶಿವರಾಜು, ಆಶೋಕ್ ಕುಮಾರ್, ಡಾ.ಆಶೋಕ್, ನಿರ್ದೇಶಕರು ಸಿ.ಕಾಳಪ್ಪ, ಬಿ.ಸಿ.ರವಿ, ಶಿವಲಿಂಗೇಗೌಡ, ಭವನೇಶ್, ಇಓ ಪ್ರೇಮ್ ಕುಮಾರ್, ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಮುಖಂಡರು ಸಾಗರೆ ಮಹೇಂದ್ರ, ಎಸ್ಸಿ ಎಸ್ಟಿ ಸಮಿತಿ ಸದಸ್ಯ ಬೆಟ್ಟ ಸ್ವಾಮಿ,  ಜಯರಾಂ, ಕಸಾಪ  ಅಧ್ಯಕ್ಷ ಕೆಂಡಗಣ್ಣಸ್ವಾಮಿ,  ಎಎಸ್ಐ ನಾರಾಯಣ್, ಬಿ.ಕೆ.ಶಿವರಾಜು, ಸುರೇಶ್, ಕಾಳಿಹುಂಡಿ ನಾಗೇಂದ್ರ, ವೆಂಕಟೇಶ್, ಬಿ.ಎನ್.ಗಂಗಾಧರ, ಬಿ.ಟಿ.ರವಿ, ರೈತ ಸಂಘದ ಕುಮಾರ್ ಗೌಡ, ಮಾದೇಗೌಡ, ಮಹೇಶ್, ರವಿ, ಸಿಬ್ಬಂದಿ ವರ್ಗದವರು ರವಿಂದ್ರ, ಮನೋಹರ್, ಮಹದೇವ ಮೂರ್ತಿ, ರವಿಚಂದ್ರನ್ ಮುಜೀಬ್ ಮತ್ತಿತರರು ಹಾಜರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*