ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

ಭಾಸ್ಕರ ಪತ್ರಿಕೆ
0

ಬೆಂಗಳೂರು: ಮಹದೇವಪುರದ ಅಪಾರ್ಟ್ಮೆಂಟ್​ವೊಂದರಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯನ್ನೇ ಹತ್ಯೆ ಮಾಡಿ, ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ.

38 ವರ್ಷದ ಮಹಿಳೆ ತ್ರಿಪರ್ಣಾ ಪೈಕ್ ದೊಡ್ಡಾನೆಕುಂದಿಯ ಅಕ್ಮೆ ಬ್ಯಾಲೆಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್ ಸಂಖ್ಯೆ ಜೆ-404 ರಲ್ಲಿ ವಾಸವಿದ್ದು, ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘವು ಅವರ ಫ್ಲಾಟ್‌ನಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ಬಿಬಿಎಂಪಿಗೆ ದೂರು ನೀಡಿದ್ದರು.

ದೂರು ಹಿನ್ನೆಲೆಯಲ್ಲಿ ಪಶುಸಂಗೋಪನಾ ತಂಡ ಫ್ಲಾಟ್‌ಗೆ ಭೇಟಿ ನೀಡಿದ್ದು, ಈ ವೇಳೆ ಮಹಿಳೆ ಅಧಿಕಾರಿಗಳು ಮನೆ ಪ್ರವೇಶಿಸಲು ನಿರಾಕರಿಸಿದ್ದಾರೆ. ಬಳಿಕ ಅಧಿಕಾರಿಗಳು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ.

ಈ ವೇಳೆ ಹೊಯ್ಸಳ ಗಸ್ತು ತಿರುಗುವ ತಂಡ ಸ್ಥಳಕ್ಕೆ ಬಂದು ಬಿಬಿಎಂಪಿ ತಂಡವನ್ನು ಒಳಗೆ ಬಿಡುವಂತೆ ಮನವೊಲಿಸಿತು. ಅವರು ಒಳಗೆ ಹೋದಾಗ, ದುರ್ವಾಸಣೆ ಬರುತ್ತಿರುವುದು ಕಂಡು ಬಂದಿದೆ. ಅಲ್ಲದೆ, ಎರಡು ನಾಯಿಗಳನ್ನು ಸರಿಯಾಗಿ ನೋಡಿಕೊಳ್ಳದಿರುವುದೂ ಕಂಡು ಬಂದಿದೆ.

ಈ ನಡುವೆ ದುರ್ವಾಸನೆಯ ಮೂಲ ಪತ್ತೆಗೆ ಮುಂದಾದಾಗ ಕೊಳೆತು ನಾರುತ್ತಿದ್ದ ನಾಯಿಯ ಶವವೊಂದು ಪತ್ತೆಯಾಗಿದೆ.

ಕೊಠಡಿಯಲ್ಲಿ ಬಚ್ಚಿಟ್ಟಿದ್ದ ನಾಯಿಯ ಮೃತದೇಹದ ಸುತ್ತಮುತ್ತ ದೇವರ ಫೋಟೊಗಳಿದ್ದು, ವಾಮಾಚಾರಕ್ಕಾಗಿ ಸಾಕು ನಾಯಿಯನ್ನು ಹತ್ಯೆಗೈದಿರುವುದಾಗಿ ಸ್ಥಳೀಯ ನಿವಾಸಿಗಳು ದೂರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*