ಬಂಧಿತ ನಾಲ್ವರು ಹೇಮಾವತಿ ಹೋರಾಟರರಿಗೆ ಬಿಡುಗಡೆ ಭಾಗ್ಯ!

ಭಾಸ್ಕರ ಪತ್ರಿಕೆ
0

ತುಮಕೂರು:  ಹೇಮಾವತಿ ಹೋರಾಟರರಿಗೆ ಜೈಲಿನಿಂದ‌ ಬಿಡುಗಡೆ ಭಾಗ್ಯ ದೊರಕಿದ್ದು, ಐವರ ಪೈಕಿ ನಾಲ್ವರಿಗೆ ಗುಬ್ಬಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಎಚ್.ಬಿ.ನವಚೇತನ್, ಬೆಣಚಿಕೆರೆ ಲೋಕೇಶ್, ಎಚ್.ಎನ್.ಚೇತನ್, ಬಿ.ವಿ.ಆನಂದ್ ಅವರಿಗೆ ಜಾಮೀನು ದೊರಕಿದೆ.  ಹೋರಾಟಗಾರರ ಪರ ಉಚಿತವಾಗಿ ತುಮಕೂರು ಜಿಲ್ಲಾ ವಕೀಲರ‌ ಸಂಘದ ಅಧ್ಯಕ್ಷ ಕೆಂಪರಾಜು‌ ವಾದ ಮಂಡನೆ ಮಾಡಿದರು.

ಮೇ 31 ರಂದು ತುಮಕೂರಿನ ಗುಬ್ಬಿಯ ಸಂಕಾಪುರದಲ್ಲಿ ಹೇಮಾವತಿ ಕೆನಾಲ್ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು.  ಈ‌ ವೇಳೆ ಪ್ರತಿಭಟನೆ ನಡೆಸಿದ ಶಾಸಕರು, ಸ್ವಾಮೀಜಿಗಳು, ರೈತ ಮುಖಂಡರು, ರೈತರು  ಸೇರಿದಂತೆ  13 ಪ್ರತ್ಯೇಕ ಎಫ್ ಐಆರ್ ದಾಖಲಿಸಿಕೊಂಡು ಪೊಲೀಸರು ಹಲವರನ್ನ ಬಂಧಿಸಿದ್ದರು. ಜೂನ್ 2 ರಂದು ಐವರನ್ನ ಬಂಧಿಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಹೋರಾಟಗಾರರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆ ಬುಧವಾರ ಜೈಲಿನಿಂದ ಬಿಡುಗಡೆಯಾಗುವ‌ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*