ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ ಹೆಚ್ಚಳ

ಭಾಸ್ಕರ ಪತ್ರಿಕೆ
0

ಬೆಂಗಳೂರು: ಬಿಸಿಯೂಟ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

2025–26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ.

ಮುಖ್ಯ ಅಡುಗೆಯವರಿಗೆ ಮಾಸಿಕ ಗೌರವಧನವನ್ನು 3,700 ರಿಂದ 4,700 ರೂ.ಗೆ ಹೆಚ್ಚಿಸಲಾಗಿದೆ. ಅಂತೆಯೇ ಅಡುಗೆ ಸಹಾಯಕರಿಗೆ 3,600 ರೂ.ನಿಂದ 4,600 ರೂ.ಗೆ ಹೆಚ್ಚಳ ಮಾಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*