ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ

ಭಾಸ್ಕರ ಪತ್ರಿಕೆ
0

ತುಮಕೂರುಸಹಕಾರ ಖಾತೆ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ ಸಮಾರಂಭದ ಹಿನ್ನೆಲೆಯಲ್ಲಿ ಶನಿವಾರ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು ಇದಕ್ಕಾಗಿ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ.

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಕೆ.ಎನ್.ರಾಜಣ್ಣ ಅವರ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಿದ್ದಾರೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ವೇದಿಕೆಯನ್ನು ಹಾಕಲಾಗಿದ್ದು ಕಾಂಗ್ರೆಸ್ ಮುಖಂಡರ ಕಟ್ ಔಟ್ ಗಳು ರಾರಾಜಿಸುತ್ತವೆ.

ಸಹಕಾರಿ ವಲಯದಲ್ಲಿ ಕೆಲಸ ಮಾಡಿರುವ ಸಹಕಾರಿಗಳು ಹಾಗೂ ರಾಜಣ್ಣ ಅಭಿಮಾನಿಗಳು ಸೇರಿದಂತೆ ಒಟ್ಟು ಎರಡು ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಗೊಂದಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*