ರಾಷ್ಟ್ರಮಟ್ಟದ BJPಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

ಭಾಸ್ಕರ ಪತ್ರಿಕೆ
0


ತುಮಕೂರು: ಬಿಜೆಪಿಯ ಲಾಲ್ ಕೃಷ್ಣ ಅಡ್ವಾಣಿ ಅವರು 75 ವರ್ಷ ಪೂರ್ಣಗೊಳಿಸಿದ ನಂತರ ಆ ಪಕ್ಷದಲ್ಲಿನ ನಿಯಮಾವಳಿ ಪ್ರಕಾರ ತೆರೆಮರೆಗೆ ಸರಿದಿದ್ದಾರೆ. ಅದೇ ರೀತಿ ಬಿಜೆಪಿ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳು ರಾಷ್ಟ್ರಮಟ್ಟದಲ್ಲಿ ಆಗಬಹುದು ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ಬಗೆಗಿನ ಕುರಿತು ಬಿಜೆಪಿ ಹಾಗೂ ಆರ್ ಎಸ್ ಎಸ್ ಮುಖಂಡರು ನಿರ್ಧರಿಸಲಿದ್ದಾರೆ ಎಂದರು.

ಪ್ರಸ್ತುತ ರಾಜಕೀಯ ಚಟುವಟಿಕೆಗಳಲ್ಲಿ ಸಾಕಷ್ಟು ಊಹಾಪೋಹಗಳು ಕೇಳಿ ಬರುತ್ತಿದ್ದು ಅದಕ್ಕೆ ಯಾವುದೇ ರೀತಿ ಅರ್ಥ ಕಲ್ಪಿಸಬೇಕಿಲ್ಲ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಪಕ್ಷ ಸಾಕಷ್ಟು ಸದೃಢವಾಗಿದೆ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದೆ ಕೆಲವು ಸಣ್ಣಪುಟ್ಟ ಬದಲಾವಣೆಗಳು ಆಗಬಹುದು ಆದರೆ ಕೆಲವು ಊಹಾಪೋಹಗಳು ಕೂಡ ಇದ್ದು ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ  ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*