ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ NIA ಹೆಗಲಿಗೆ

ಭಾಸ್ಕರ ಪತ್ರಿಕೆ
0

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಡೆಸಲಿದೆ. ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬಂಧ ಆದೇಶ ಹೊರಡಿಸಿದೆ.

ಸುಮಾರು ಒಂದು ತಿಂಗಳ ಹಿಂದೆ ನಡೆದ ಈ ಕೊಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿಸಿತ್ತು. ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಎಂಟು ಜನರನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ.

2025ರ ಆರಂಭದಲ್ಲಿ ಮಂಗಳೂರಿನಲ್ಲಿ 42 ವರ್ಷದ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಯಿತು. ಈ ಘಟನೆಯ ನಂತರ, ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಯಿತು.

ವಿಶ್ವ ಹಿಂದೂ ಪರಿಷತ್ (VHP) ಮತ್ತು ಇತರ ಹಿಂದೂ ಸಂಘಟನೆಗಳು ಮೇ 3 ರಂದು ಜಿಲ್ಲಾದ್ಯಂತ ಬಂದ್ ಗೆ ಕರೆ ನೀಡಿದ್ದವು. ಪ್ರತಿಭಟನೆ ವೇಳೆ ಪ್ರಕರಣವನ್ನು ಎನ್ ಐಎಗೆ ವಹಿಸಬೇಕು ಎಂದು ಪಟ್ಟುಹಿಡಿದಿದ್ದವು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*