ಹೃದಯ ವಿದ್ರಾವಕ ಘಟನೆ: ಒಂಟಿ ಜೀವನದಿಂದ ಬೇಸತ್ತು ತಾಯಿ ಮಗಳಿಂದ ದುಡುಕಿನ ನಿರ್ಧಾರ!

ಭಾಸ್ಕರ ಪತ್ರಿಕೆ
0

ಮಂಡ್ಯ:  ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾಯಿ–ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ನೆಹರುನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ರಶ್ಮಿ (28) ಮತ್ತು ಆಕೆಯ 9 ವರ್ಷದ ಪುತ್ರಿ ಎಂದು ಗುರುತಿಸಲಾಗಿದೆ.

ಪತಿಯಿಂದ ದೂರವಾಗಿದ್ದ ರಶ್ಮಿ ಮಂಡ್ಯದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂಟಿ ಜೀವನದಿಂದ ಹತಾಶರಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ತಾಯಿ ಮತ್ತು ಮಗಳು ಇಬ್ಬರೂ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಘಟನಾ ಸ್ಥಳದಿಂದ ಡೆತ್ ನೋಟ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*