ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಭಾಸ್ಕರ ಪತ್ರಿಕೆ
0

ಬೀದರ್: ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ.

ಜಿಲ್ಲಾದ್ಯಂತ ಮೊಹರಂ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬವನ್ನು ಶಾಂತಿಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ–21 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ

ಜಿಲ್ಲಾದ್ಯಂತ ಜು.6 ರ ಬೆಳಿಗ್ಗೆ 6 ಗಂಟೆಯಿಂದ ಜು.7 ರ ಬೆಳಿಗ್ಗೆ 6 ಗಂಟೆವರೆಗೆ ಎಲ್ಲಾ ವಿಧದ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*