ಧರ್ಮಸ್ಥಳಕ್ಕೆ ಭೇಟಿ ನೀಡಿದ ಎಸ್ ಐಟಿ  ಅಧಿಕಾರಿಗಳು: ತನಿಖೆ ಆರಂಭ

ಭಾಸ್ಕರ ಪತ್ರಿಕೆ
0

ಬೆಳ್ತಂಗಡಿ: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿರುವ ನೂರಾರು ಹತ್ಯೆ ಪ್ರಕರಣಗಳ ಸಂಬಂಧ ತನಿಖೆ ನಡೆಸಲು ಸರ್ಕಾರ ನಿಯೋಜಿಸಿರುವ ವಿಶೇಷ ತನಿಖಾ ತಂಡ(SIT) ಇಂದು ಧರ್ಮಸ್ಥಳ ಠಾಣೆಗೆ ಆಗಮಿಸಿ ದಾಖಲೆಗಳನ್ನು ಪಡೆದುಕೊಂಡಿದೆ.

ಎಸ್ ಐಟಿಯ ಜಿತೇಂದ್ರ ಕುಮಾರ್ ದಯಾಮ ಹಾಗೂ ಇತರ ಅಧಿಕಾರಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿದರು. ಧರ್ಮಸ್ಥಳ ಠಾಣೆಯ ಪಿಎಸ್ ಐ ಸಮರ್ಥ್ ಅವರಿಂದ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಶುಕ್ರವಾರದಿಂದಲೇ ಅಧಿಕೃತವಾಗಿ ತನಿಖಾ ಕಾರ್ಯ ಆರಂಭವಾಗಿದೆ ಎನ್ನಲಾಗಿದೆ. ಈ ಮೂಲಕ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿರುವ ಬಹುದೊಡ್ಡ ಅಪರಾಧ ಪ್ರಕರಣದ ತನಿಖೆ ಕಾರ್ಯ ಆರಂಭಗೊಂಡಂತಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*