ಮದ್ಯಪಾನ ಮಾಡಿ ಶಾಲೆಯಲ್ಲಿ ಮಲಗಿದ ಮುಖ್ಯ ಶಿಕ್ಷಕ ಅಮಾನತು!

ಭಾಸ್ಕರ ಪತ್ರಿಕೆ
0

ರಾಯಚೂರು: ಮದ್ಯಪಾನ ಮಾಡಿ ಶಾಲೆಯ ಅಡುಗೆ ಕೋಣೆ ಬಳಿಯಲ್ಲಿ ಮಲಗಿದ ಆರೋಪ ಎದುರಿಸುತ್ತಿದ್ದ ರಾಯಚೂರಿನ ಮಸ್ಕಿ ತಾಲೂಕಿನ ಗೋನಾಳ ಶಾಲಾ ಮುಖ್ಯೋಪಾಧ್ಯಾಯ ನಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ.

ಹೆಡ್ ಮಾಸ್ಟರ್ ಕಂಠಪೂರ್ತಿ ಕುಡಿದು ಶಾಲಾ ಅಡುಗೆ ಕೋಣೆ ಬಾಗಿಲ ಬಳಿಯಲ್ಲಿ ಮಲಗಿರುವ ಬಗ್ಗೆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ವಿಚಾರ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಪರಿಶೀಲನೆ ನಡೆಸಿ ಕ್ರಮಕೈಗೊಂಡಿದೆ. ಕರ್ತವ್ಯ ಲೋಪ, ದುರ್ನಡತೆ ಮತ್ತು ಬೇಜವಾಬ್ದಾರಿತನದ ಹಿನ್ನೆಲೆ ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ ಅಮಾನತು ಆದೇಶ ಹೊರಡಿಸಿದ್ದಾರೆ.

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗೋನಾಳ ಗ್ರಾಮದ ಅಂಬಾದೇವಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ನಿಂಗಪ್ಪ ಕಂಠ ಪೂರ್ತಿ ಮದ್ಯಪಾನ ಮಾಡಿ ಬಂದು ಶಾಲೆಯಲ್ಲಿ ಮಲಗಿದ್ದ. ಈ ಸಂಬಂಧ ಫೋಟೋ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*