K.B ಗಣಪತಿ ನಿಧನಕ್ಕೆ ಡಾ. ಭಾಸ್ಕರ್ ಸಂತಾಪ

ಭಾಸ್ಕರ ಪತ್ರಿಕೆ
0

ತಿಪಟೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು.

ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀವಾಗಿದ್ದವರು.

ಇವರ ಈ ಅಗಲಿಕೆಗೆ ಹಿರಿಯ ಪತ್ರಕರ್ತರಾದ ಡಾ. ಬಾಸ್ಕರ್‌ ತಿಪಟೂರು, ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರು ತಿಪಟೂರು ಇವರು ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಘನತೆಯಿಂದ ಪತ್ರಿಕೋದ್ಯಮ ನಡೆಸಿದ ಗಣಪತಿ ಅವರ ನಿಧನದಿಂದ ಸುದ್ದಿಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಭಾಸ್ಕರ್  ಶೋಕಿಸಿದ್ದಾರೆ. ಗಣಪತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*