
ಗಂಗಾವತಿ: ಸೆಪ್ಟೆಂಬರ್ ಒಂದರಂದು ಕಂಪ್ಲಿ ಪಟ್ಟಣದ ಸರಕಾರಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಪತ್ರಿಕೋದ್ಯಮದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮದ ಕುರಿತು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರು ಹಿರಿಯ ಪತ್ರಕರ್ತರಾದ ಕೆ ನಿಂಗಜ್ಜ ಇವರು ಉಪನ್ಯಾಸ ನೀಡಲಿದ್ದಾರೆ ಕಾರ್ಯಕ್ರಮದಲ್ಲಿ ಶಾಸಕರಾದ ಜೆ.ಎನ್.ಗಣೇಶ,ಪೂಜ್ಯ ಕಂಪ್ಲಿ ಕಲ್ಮಠದ ಪ್ರಭುಸ್ವಾಮಿಗಳು ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ತಾಲೂಕು ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳು ಪಾಲ್ಗೊಳ್ಳುತ್ತಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
