ಧರ್ಮಸ್ಥಳ: ಎರಡನೇ ಸಾಕ್ಷಿ ದೂರುದಾರನಿಗೆ ಜೀವ ಬೆದರಿಕೆ: 17 ಮಂದಿಯ ವಿರುದ್ಧ ದೂರು

ಭಾಸ್ಕರ ಪತ್ರಿಕೆ
0

ಬೆಳ್ತಂಗಡಿ: ಯುವತಿಯ ಮೃತದೇಹವನ್ನು ಕಾನೂನು ಬಾಹಿರವಾಗಿ ಹೂತು ಹಾಕಿರುವುದನ್ನು ತಾನು ನೋಡಿದ್ದೇನೆ ಎಂದು ಎಸ್ ಐಟಿಗೆ ಮಾಹಿತಿ ನೀಡಿರುವ 2ನೇ ಸಾಕ್ಷಿ ದೂರುದಾರನಿಗೆ ಬೆದರಿಕೆ ಹಾಕಿರುವ ಸಂಬಂಧ 17 ಮಂದಿಯ ವಿರುದ್ಧ ದೂರು ದಾಖಲಿಸಲಾಗಿದೆ.

ಎರಡನೇ ದೂರುದಾರ ಜಯಂತ್ ಟಿ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನನ್ನು ಕೆಲವರು ಹಿಂಬಾಲಿಸಿಕೊಂಡು ಬಂದು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸುಮಾರು 17 ಮಂದಿಯ ವಿರುದ್ಧ ಅವರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಎಸ್‌ ಐಟಿಗೆ ದೂರು ನೀಡಿದ ದಿನದಿಂದ ತನ್ನ ಮೇಲೆ ಹಲ್ಲೆ ಮಾಡಲು ಮಾಧ್ಯಮಗಳ ಮೂಲಕ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ವಸಂತ್ ಗಿಳಿಯಾರು, ಕಿರಿಕ್ ಕೀರ್ತಿ, ವಿಕಾಸ್ ಶಾಸ್ತ್ರಿ ಮತ್ತು ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಎಂಬವರನ್ನು ದೂರಿನಲ್ಲಿ ಉಲ್ಲೇಖಿಸಿರುವ ಜಯಂತ್ ಟಿ., ತಂಡವೊಂದು ತನ್ನನ್ನು ಹಿಂಬಾಲಿಸಿಕೊಂಡು ಬಂದು ಕೊಲೆಗೆ ಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*