ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ನೇಣಿಗೆ ಶರಣು

ಭಾಸ್ಕರ ಪತ್ರಿಕೆ
0

ಬೆಂಗಳೂರು: ಕಾಮಿಡಿ ಕಿಲಾಡಿ ಖ್ಯಾತಿಯ ಚಂದ್ರಶೇಖರ್ ಸಿದ್ಧಿ(Chandrashekhar Siddhi) ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ್ದ ಚಂದ್ರಶೇಖರ್ ಮೃತಪಟ್ಟವರು. ಶುಕ್ರವಾರ ಅವರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕಾಮಿಡಿ ಕಿಲಾಡಿ ಮೂಲಕ ಜನಪ್ರಿಯತೆ ಗಳಿಸಿದ್ದ ಚಂದ್ರಶೇಖರ್, ಕೆಲವು ಧಾರಾವಾಹಿ ಸೇರಿದಂತೆ ಸಣ್ಣಪುಟ್ಟ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು. ಮಿಮಿಕ್ರಿ ಕಲಾವಿದರೂ ಆಗಿದ್ದರು.

ವರದಿಗಳ ಪ್ರಕಾರ ಚಿತ್ರರಂಗದಲ್ಲಿ ಅವಕಾಶಗಳು ಸಿಗದ ಕಾರಣ, ತಮ್ಮ ಊರಿಗೆ ವಾಪಸ್ ಆಗಿದ್ದ ಚಂದ್ರಶೇಖರ್, ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಲಾವಿದನಾಗಿ ಕನಸು ಭಗ್ನಗೊಂಡ ಹಿನ್ನೆಲೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮಾನಸಿಕ ಖಿನ್ನತೆಯ ಹಿನ್ನೆಲೆ ಅವರು, ಚಿಕಿತ್ಸೆಯನ್ನೂ ಪಡೆದಿದ್ದರು ಎನ್ನಲಾಗಿದೆ. ಚಂದ್ರಶೇಖರ್ ಅರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಪತ್ನಿ ಜತೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*