ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ದಿಂದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ರವರನ್ನು ರಾಜ್ಯಾಧ್ಯಕ್ಷ ಜಿ.ಎಂ ರಾಜಶೇಖರ್ ಭೇಟಿ

ಭಾಸ್ಕರ ಪತ್ರಿಕೆ
0

ಬೆಂಗಳೂರು: ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘದ ಪತ್ರಕರ್ತರ ಸಮಸ್ಯೆಗಳ ಕುರಿತು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್ ರವರನ್ನು  ರಾಜ್ಯಾಧ್ಯಕ್ಷರಾದ ಜಿ.ಎಂ. ರಾಜಶೇಖರ್ ಭೇಟಿ ಮಾಡಿ ಚರ್ಚಿಸಲಾಯಿತು.


ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘದ ರಾಜ್ಯ ಸಂಘ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ರಾದ ಕೆ.ವಿ. ಪ್ರಭಾಕರ್ ರವರಿಗೆ ನಗರ- ಗ್ರಾಮೀಣ ಭಾಗದ ಪತ್ರಕರ್ತರ ಬೇಡಿಕೆಗಳು ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಗ್ರಾಮೀಣ ಭಾಗದ ಪತ್ರಕರ್ತರಿಗೆ ನೀಡುವ ಬಸ್ ಪಾಸ್ ಹಾಗೂ ಆರೋಗ್ಯ ವಿಮೆ. ಹಿರಿಯ ಪತ್ರಕರ್ತರ ನಿವೃತ್ತಿ ವೇತನ ಸೇರಿದಂತೆ ಪತ್ರಿಕೆಗಳ ಮಾಧ್ಯಮ ಪಟ್ಟಿ ಮತ್ತು ಮಾನ್ಯತೆ ಕಾರ್ಡ್ ಇನ್ನಿತರ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಗಮನಕ್ಕೆ ತರಲಾಗಿತ್ತು.


ಈ ಬಗ್ಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ರಾದ ಕೆ.ವಿ. ಪ್ರಭಾಕರ್ ಅವರು ಪರಿಗಣಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಕಳಿಸಲಾಗಿದ್ದು ಮುಂದಿನ ದಿನಗಳಲ್ಲಿ ಸಮಸ್ಯೆಗೆ ಸ್ಪಂದಿಸುವುದಾಗಿ ಮಾತನಾಡಿದರು.
ಪತ್ರಕರ್ತರ ಸಮಸ್ಯೆ ಕುರಿತಂತೆ ರಾಜ್ಯಮಟ್ಟದಲ್ಲಿ ನಡೆಯುವ ಅಧಿಕಾರಿಗಳ ಹಾಗೂ ಮುಖ್ಯಮಂತ್ರಿಗಳು ,-ಸಚಿವರ ಸಭೆಗಳಿಗೆ ಕರ್ನಾಟಕ ಮಾಧ್ಯಮ ಪತ್ರ ಸಂಘವನ್ನು ಪರಿಗಣಿಸಬೇಕೆಂಬ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಮುಂದಿನ ದಿನಗಳಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘದ ಸದಸ್ಯರುಗಳ ಪತ್ರಕರ್ತರ ಸಮಸ್ಯೆ ಕುರಿತಂತೆ ಚರ್ಚಿಸುವುದಾಗಿ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯಧ್ಯಕ್ಷರಿಗೆ ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*