ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮುಂದೆ ಪೊಲೀಸರ ದಂಡೇ ನೆರೆದಿದ್ದು, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಬೆಳ್ತಂಗಡಿಗೆ ಆಗಮಿಸಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಹೇಳಿಕೆ ನೀಡಿದ್ದಾರೆನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಈ ಕ್ರಮಕ್ಕೆ ಮುಂದಾಗಿದ್ದಾರೆ ಅಂತ ಸದ್ಯಕ್ಕೆ ಹೇಳಲಾಗಿದೆ.
ಸದ್ಯ ವಶಕ್ಕೆ ಪಡೆಯಲು ಆಗಮಿಸಿದ ಪೊಲೀಸರಿಗೆ ಮಹೇಶ್ ಶೆಟ್ಟಿ ತಿಮರೋಡಿ ವಕೀಲರು ಅರೆಸ್ಟ್ ವಾರೆಂಟ್ ಕೊಡಿ ಅಂತ ಪ್ರಶ್ನೆ ಮಾಡಿದ್ದಾರೆನ್ನಲಾಗಿದೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

