ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಭಾಸ್ಕರ ಪತ್ರಿಕೆ
0

 

ತಿಪಟೂರು: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಪಟ್ಟಣದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಜಿ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ಧರ್ಮಸ್ಥಳ ಹಿಂದೂಗಳ ಪವಿತ್ರ ಸ್ಥಳವಾಗಿದ್ದು ದೇಶದಲ್ಲಿ ಕೋಟ್ಯಾಂತರ ಭಕ್ತರನ್ನು ಹೊಂದಿದೆ. ರಾಜ್ಯದಲ್ಲಿ ಜಾತ್ಯತೀತವಾಗಿ ಎಲ್ಲಾ ಧರ್ಮಿಯರಿಗೂ ಉಚಿತ ದಾಸೋಹ ಗ್ರಾಮೀಣ ಭಾಗದಲ್ಲಿ ಗ್ರಾಮೋದ್ಯೋಗ ಸಂಸ್ಥೆ ಮೂಲಕ ದೇವಸ್ಥಾನಗಳ ಜೀರ್ಣೋದ್ಧಾರ, ಎಲ್ಲಾ ವರ್ಗದ ಮಹಿಳೆಯರ ಸಬಲೀಕರಣದಂತಹ ಸಮಾಜೋದ್ಧಾರ ಕೆಲಸಗಳನ್ನು ಪೂಜ್ಯ ವಿರೇಂದ್ರ ಹೆಗ್ಗಡೆಯವರು ಮಾಡುತ್ತಾ ಬರುತ್ತಿದ್ದು, ಇವರ ವಿರುದ್ಧ ಅಪಪ್ರಚಾರ ಮಾಡುವುದನ್ನು ರಾಜ್ಯದ ಅಸಂಖ್ಯಾತ ಹಿಂದುಗಳು ಸಹಿಸುವುದಿಲ್ಲ, ಅದಕ್ಕಾಗಿಯೇ ರಾಜ್ಯದ್ಯಂತ ಬಿಜೆಪಿ ಪಕ್ಷವು ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಘೋಷಣೆಯೊಂದಿಗೆ ಹೋರಾಟ ನಡೆಸುತ್ತಿದೆ. 

ಕ್ಷೇತ್ರವನ್ನು ಅವಮಾನಿಸುವ  ಮೂಲಕ ಕೆಲ ಹಿಂದೂಗಳ ಧಾರ್ಮಿಕ ಭಾವನೆ ವಿರುದ್ಧ ನಡೆದುಕೊಳ್ಳುತ್ತಿರುವ ಕಿಡಿಗೇಡಿಗಳು ಸುಳ್ಳು ಅಪಪ್ರಚಾರ ಮಾಡುತ್ತಿದ್ದು ಕೂಡಲೆ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಬಿಜೆಪಿ ಮುಖಂಡ ಗಂಗರಾಜು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತ್ಯತೀತ ಮುಖ್ಯಮಂತ್ರಿಯಾಗದೆ ಜಾತಿವಾದಿ ಮುಖ್ಯಮಂತ್ರಿಯಾಗಿದ್ದಾರೆ. ಬಿಜೆಪಿ ಕಾನೂನು ಧರ್ಮ ಸಂಸ್ಕಾರ ಮತ್ತು ಸಂಸ್ಕೃತಿಗೆ ಗೌರವ ಕೊಡುತ್ತದೆ ಧರ್ಮಕ್ಕೆ ಧಕ್ಕೆಯಾದಾಗ ಹೋರಾಟ ಮಾಡುತ್ತೇವೆ. ಎಂದರು.

ಮುಖಂಡರಾದ ಆಯರಹಳ್ಳಿ ಶಂಕರಪ್ಪ ಹರಿಸಮುದ್ರ ಗಂಗಾಧರ್, ಮಾಜಿ ನಗರಸಭೆ ಅಧ್ಯಕ್ಷ ರಾಮ್ ಮೋಹನ್, ಶಶಿಕಿರಣ್, ಮಾಜಿ ನಗರಸಭಾ ಸದಸ್ಯ ಪ್ರಸನ್ನ ಕುಮಾರ್, ತರಕಾರಿ ಗಂಗಾಧರ್, ಮುಖಂಡ ಬಿಸಿಲೇಹಳ್ಳಿ ಜಗದೀಶ್, ನಗರ ಅಧ್ಯಕ್ಷ ಜಗದೀಶ್‌, ಗ್ರಾಮಾಂತರ ಅಧ್ಯಕ್ಷ ಸತೀಶ್ ಸೇರಿದಂತೆ ಧರ್ಮಸ್ಥಳ ಕ್ಷೇತ್ರದ ಅಭಿಮಾನಿಗಳು ಹಾಗೂ ಮಹಿಳೆಯರು ಭಾಗವಹಿಸಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*