ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಇಂದು ಬೆಳಗ್ಗಿನ ಜಾವ ತಮ್ಮ ಸ್ವಗೃಹದಲ್ಲಿ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ‘ ಆದಿನಗಳು’, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್ ಪಾರ್ಟಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುಬೇಡಿಕೆಯ ನಟರಾಗಿದ್ದರು.

