ಮಹೇಶ್ ಶೆಟ್ಟಿ ತಿಮರೋಡಿ ಬಂಧನವಾಗುತ್ತಾ? ಗೃಹ ಸಚಿವರ ಪ್ರತಿಕ್ರಿಯೆ ಏನು?

ಭಾಸ್ಕರ ಪತ್ರಿಕೆ
0

ಬೆಂಗಳೂರು: ಸೌಜನ್ಯ ಪರ ಹೋರಾಟಗಾರ, ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲು ಸೂಚನೆ ನೀಡುವುದಾಗಿ ನಿನ್ನೆ ವಿಧಾನ ಸಭೆಯಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಯಾವುದೇ ಬಂಧನ ಆದೇಶವಾಗಿಲ್ಲ ಎಂದು ಗೃಹ ಸಚಿವರು ಸ್ಪಷ್ಟನೆ ನೀಡಿದ್ದಾರೆ. ನಾವು ತೀರ್ಮಾನವನ್ನು ಲೋಕಲ್ ಪೊಲೀಸರಿಗೆ ಬಿಟ್ಟಿದ್ದೇವೆ ಎಂದಿದ್ದಾರೆ.

ಯಾರೋ ಏನೋ ಅಂದ್ರು ಅಂತ ಅಷ್ಟಕ್ಕೇ ಅವರ ಮೇಲೆ ಕೇಸ್ ಹಾಕಿ ಅರೆಸ್ಟ್ ಮಾಡಕ್ಕಾಗುವುದಿಲ್ಲ ಎಂದು ಗೃಹ ಸಚಿವರು ಹೇಳಿದರು.

ಸಿದ್ದರಾಮಯ್ಯ 24 ಕೊಲೆಗಳನ್ನ ಮಾಡಿಸಿದ್ದಾರೆ ಎಂಬ ಶಾಸಕ ಹರೀಶ್ ಪೂಂಜಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಹರೀಶ್ ಪೂಂಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದ ವಿಡಿಯೋ ತಿರುಚಲಾಗಿತ್ತು. ವಿಪಕ್ಷ ನಾಯಕರು ಈ ವಿಡಿಯೋವನ್ನು ತೋರಿಸಿ ಸದನದ ದಾರಿ ತಪ್ಪಿಸಿದ್ದರು. ಇದೀಗ ವಾಸ್ತವಾಂಶ ಬೆಳಕಿಗೆ ಬಂದ ಬೆನ್ನಲ್ಲೇ, ವಿಪಕ್ಷ ನಾಯಕರ ಸುಳ್ಳು ಆರೋಪವನ್ನು ನಂಬಿ ಮಹೇಶ್ ಶೆಟ್ಟಿ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ಮುಜುಗರಕ್ಕೀಡಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*