ಬೀದರ್ ನಲ್ಲಿ ಮಾದಿಗ ಸಮುದಾಯದಿಂದ ಒಳಮೀಸಲಾತಿ ಜಾರಿಗಾಗಿ ಪ್ರತಿಭಟನೆ

ಭಾಸ್ಕರ ಪತ್ರಿಕೆ
0

ಬೀದರ್: ಮಾದಿಗ ಸಂಘಟನೆಗಳ ಒಕ್ಕೂಟದ  ಮಾದಿಗ ದಂಡೋರ ಹೋರಾಟ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫೆರ್ನಾಂಡಿಸ್ ಹಿಪ್ಪಳಗಾಂವ್ ಅವರ ನೇತೃತ್ವದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಬೀದರ್ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೀದರ ನಗರದಲ್ಲಿ ಬೃಹತ್ ಅರೆಬೆತ್ತಲೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಆಗಸ್ಟ್ 16ರೊಳಗೆ ಒಳಮೀಸಲಾತಿ ಜಾರಿ ಮಾಡಲೇ ಬೇಕೆಂದು ಒತ್ತಾಯಿಸಿ ಬೀದರ್ ನಗರದ ಜಿಲ್ಲಾಧಿಕಾರಿ ಕಚೇರಿಯವರೆಗೆ ಅರೆಬೆತ್ತಲೆ   ಮೂಲಕ  ಪ್ರತಿಭಟಣೆ ಮಾಡಿದರು.

ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ,  ದಲಿತ ವಿರೋಧಿ ರಾಜ್ಯ ಸರ್ಕಾರ, ಒಳಮೀಸಲಾತಿ ಜಾರಿಗೆ ಹಿಂದೇಟು ಹಾಕುತ್ತಿದೆ.  ಸುಮಾರು 35 ವರ್ಷಗಳಿಂದ ಮಾದಿಗ ಸಮುದಾಯದಿಂದ ಹೋರಾಟ ನಡೆಸುತ್ತಿದ್ದರು ಕೂಡಾ ಇನ್ನು ನ್ಯಾಯ ಸಿಕ್ಕಲ್ಲಾ.   ಒಳಮೀಸಲಾತಿ ಜಾರಿ ಮಾಡಿ,  ಇಲ್ಲವೇ ಕುರ್ಚಿ ಖಾಲಿ ಮಾಡಿ ,  ದಲಿತರ ಪಾಲಿಗೆ ಸತ್ತಿದೆ  ಸರ್ಕಾರ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ನಾವು ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ. ದಲಿತರಿಗೆ ಮೋಸ ಮಾಡಿಲ್ಲ ಎಂದು ಹೇಳುತ್ತಾರೆ. 2023ರ ಚುನಾವಣೆಯಲ್ಲಿ ಕರ್ನಾಟಕ ವಿಧಾನಸಭೆ ಪ್ರಚಾರದ ವೇಳೆ ಪ್ರಣಾಳಿಕೆಯಲ್ಲಿ ಮೊದಲನೇ ಸಂಪುಟ ಸಭೆಯಲ್ಲಿ ಒಪ್ಪಿಗೆ ಕೊಟ್ಟು ಜಾರಿ ಮಾಡುವುದಾಗಿ ಹೇಳಿದ್ದರು ಇದೀಗ ಮಾದಿಗ ಸಮುದಾಯದವರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇಂದಿಗೆ ನ್ಯಾಯಮೂರ್ತಿ ಚಂದ್ರಚೂಡ ಅವರು ತೀರ್ಪು ಕೊಟ್ಟು ಒಂದು ವರ್ಷ ಪೂರ್ಣಗೊಂಡಿದೆ. ಆದರೆ, ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಠಾನದ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇಂದು  ರಾಜ್ಯಾದ್ಯಂತ ಎಲ್ಲ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ್ದೇವೆ. ಇನ್ನು ಆ.11ರಂದು ಅಧಿವೇಶನ ಆರಂಭ ಕೈಗೊಳ್ಳದಿದ್ದರೆ ಆ. 16 ನಂತರ ರಾಜ್ಯಾದ್ಯಂತ ಅಸಹಕಾರ ಚಳವಳಿ ಸೇರಿದಂತೆ ತೀವ್ರ ಹೋರಾಟ ಆರಂಭಸಲಿದ್ದೇವೆ. ಎಂದು ಮಾದಿಗ ದಂಡೋರ ಹೋರಾಟ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫೆರ್ನಾಂಡಿಸ್ ಹಿಪ್ಪಳಗಾಂವ್ ತಿಳಿಸಿದ್ದಾರೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*