SIT ತನಿಖೆ ಬಗ್ಗೆ ಆಕ್ಷೇಪವಿಲ್ಲ: ಬಿ.ವೈ.ವಿಜಯೇಂದ್ರ

ಭಾಸ್ಕರ ಪತ್ರಿಕೆ
0

ಬೆಳ್ತಂಗಡಿ: ಎಸ್ ಐಟಿ ತನಿಖೆ ಬಗ್ಗೆ ಆಕ್ಷೇಪವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಎಸ್ ಐಟಿ ರಚನೆಯಾದಾಗ ನಾವು ಸ್ವಾಗತಿಸಿದ್ದೇವೆ. ಆದರೆ ಕ್ಷೇತ್ರದ ಬಗ್ಗೆ ಷಡ್ಯಂತ್ರ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಅಪಪ್ರಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಅಂತಹ ಶಕ್ತಿಗಳ ವಿರುದ್ಧ ಕ್ರಮಕ್ಕೆ ಯಾಕೆ ಮುಂದಾಗುತಿಲ್ಲ ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಸಿ.ಟಿ.ರವಿ, ಚಲವಾದಿ ನಾರಾಯಣಸ್ವಾಮಿ, ಸಂಸದ ಬ್ರಿಜೇಶ್ ಚೌಟ, ಶಾಸಕರಾದ  ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ, ಭಗೀರಥಿ ಮುರುಳ್ಯ, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್, ಯಶ್ ಪಾಲ್ ಸುವರ್ಣ ಮತ್ತಿತರರು ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*