ಚಿಕ್ಕಬಳ್ಳಾಪುರ: ಗಣೇಶ ವಿಸರ್ಜನೆ ವೇಳೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿಪತಿ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ನಿನ್ನೆ ರಾತ್ರಿ ಗಣೇಶೋತ್ಸವ ಮೆರವಣಿಗೆ ನಡೆಯುತ್ತಿದ್ದ ವೇಳೆ ನಾಗವಲ್ಲಿ ಹಾಡಿಗೆ ಇವರು ಎಲ್ಲರ ಜೊತೆಗೆ ಡಾನ್ಸ್ ಮಾಡುತ್ತಿದ್ದರು.
ಡಾನ್ಸ್ ಮಾಡುತ್ತಿದ್ದಂತೆಯೇ ಸುಸ್ತಾದ ಲಕ್ಷ್ಮೀಪತಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಲಕ್ಷ್ಮೀಪತಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

