ಹಾಸನ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಭಾರೀ ಅಪಘಾತವೊಂದು ಸಂಭವಿಸಿ, ಕನಿಷ್ಠ ನಾಲ್ವರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ವರದಿಗಳ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ.
ರಸ್ತೆಯ ಒಂದು ಬದಿಯಿಂದ ಡಿವೈಡರ್ ಗೆ ಡಿಕ್ಕಿ ಹೊಡೆದ ಟ್ರಕ್ ವೇಗವಾಗಿ ಸಾವಿರಾರು ಜನರು ಸಾಗುತ್ತಿದ್ದ ಮೆರವಣಿಗೆಯ ಮೇಲೆಯೇ ಟ್ರಕ್ ಹರಿದಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಾಜಿ ಸಚಿವ ಎಚ್ಡಿ ರೇವಣ್ಣ, ಪರಿಷತ್ ಸದಸ್ಯ ಸೂರಜ್ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿದ್ದಾರೆ.

