ಪಣಂಬೂರು: ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬುಧವಾರ ಬೆಳಗ್ಗಿನ ವೇಳೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿರುವ ಘಟನೆ ಮಂಗಳೂರು ನಗರದ ಹೊರವಲಯದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ನಡೆದಿದೆ.
ಅರೋಮಾಝನ್ ಎಂಬ ಕಂಪೆನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಳಗ್ಗೆ 5 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಎಂಸಿಎಫ್, ಎನ್ಎಂ ಪಿಎ, ಮತ್ತು ಕದ್ರಿಯ ಅಗ್ನಿ ಶಾಮಕ ದಳ ವಾಹನಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿವೆ.
ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡಕ್ಕೆ ಕಾರಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

