ತಿಪಟೂರು: ಅಕ್ಷರ ಕಲಿಸುವ ಗುರುವಿನ ಸ್ಥಾನ ದೊಡ್ಡದಾಗಿದೆ. ಹಾಗೆಯೇ ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ, ಗುರುವಿನ ಸ್ಥಾನ ಪ್ರಮುಖವಾಗಿದೆ. ಒಬ್ಬ ವ್ಯಕ್ತಿಗೆ ಸಮಾಜವನ್ನು ನಿರ್ಮಿಸುವಂತಹ ಶಕ್ತಿ ಸಾಮರ್ಥ್ಯ ಇದ್ದರೆ ಅದು ಶಿಕ್ಷಕರಿಗೆ ಮಾತ್ರ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು. ಅವರು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ, ತಾಲೂಕು ಶಿಕ್ಷಕರ ದಿನ ಆಚರಣೆ ಸಮಿತಿ ವತಿಯಿಂದ ತಾಲೂಕು ಮಟ್ಟದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ 138ನೇ ಜಯಂತಿ, ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶಾಲೆಯ ಮುಖ್ಯ ಶಿಕ್ಷಕ ಹಿಂದುಳಿದ ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸಿ, ವಿದ್ಯಾರ್ಥಿಯ ಪಠ್ಯ ಪೂರಕ ಚಟುವಟಿಕೆಗೆ ಸಹಕಾರಿಯಾಗಬೇಕು ಎಂದು ತಿಳಿಸಿದರು. ಇದೇ ಸಂದರ್ಭ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಿಂದ ಮೆರವಣಿಗೆಗೆ ಚಾಲನೆ ನೀಡಿ, ವೇದಿಕೆ ಕಾರ್ಯಕ್ರಮದ ಸಮುದಾಯ ಭವನದ ಹೊರಗಡೆ ಧ್ವಜಾರೋಹಣ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಯಮುನಾ ಧರಣೇಶ್, ಉಪಾಧ್ಯಕ್ಷೆ ಮೇಘ ಶ್ರೀ ಪಂಚ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಕಾಂತರಾಜು, ತಾಪಂ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಎಸ್.ತಾರಾಮಣಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕ ಎಸ್.ಸಿ.ಮಂಜುನಾಥ್, ರಾಜ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಈ.ರಮೇಶ್, ಎಸ್.ವಿ.ಪಿ ಕಾಲೇಜು ಪ್ರಾಂಶುಪಾಲ ರೇಣುಕಯ್ಯ, ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷ ಆದಿತ್ಯ, ಪ್ರಾಂಶುಪಾಲ ಶಿವಕುಮಾರ್, ಇಲಾಖೆಯ ಸಂಘ ಸಂಸ್ಥೆಗಳ ಅಧ್ಯಕ್ಷರಾದ ಜಯರಾಂ, ಚನ್ನೇಗೌಡ, ದಕ್ಷಿಣಮೂರ್ತಿ, ಮುಖಂಡ ಸುರೇಶ್ ಮತ್ತು ಚಿದಾನಂದ್ ಸೇರಿದಂತೆ ಮುಖಂಡರುಗಳು, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರುಗಳು ಭಾಗವಹಿಸಿದ್ದರು.
