ತಿಪಟೂರು: ಕಂದಾಯ ಇಲಾಖೆ ಕಲ್ಪತರು ನಾಡು ತಾಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಪೂಜೆ ಮಹೋತ್ಸವವನ್ನು ಆಯೋಜಿಸಲಾಗಿತ್ತು, ಶಾಸಕ ಷಡಕ್ಷರಿ ಉತ್ತರ ನಿಖಿಲ್ ರಾಜಣ್ಣನವರು ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ್ ಜಗನ್ನಾಥ್ ವಿಶ್ವಕರ್ಮ ಸಂಘದ ಅಧ್ಯಕ್ಷರುಗಳಾದ ಪರಮೇಶಚಾರ್, ನಾಗರಾಜಚಾರ್, ಗೋಪಿನಾಥಚಾರ್ ಹಾಗೂ ವಿಶ್ವಕರ್ಮ ಜನಸೇವಾ ಸಂಘದ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಭಾಸ್ಕರಾಚಾರ್ ಉಪಸ್ಥಿತರಿದ್ದರು, ಪ್ರಾಸ್ತಾವಿಕ ನುಡಿಗಳನ್ನು ಮಂಜುನಾಥಚಾರ್ಯರವರು ಮಾತನಾಡಿ 10ವರ್ಷದಿಂದ ಸಿದ್ದರಾಮಯ್ಯನವರ ಸರ್ಕಾರದ ವತಿಯಿಂದ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ ಎಂದರು.
ಯುವ ಘಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣನವರು ಮಾತನಾಡಿ ಸರ್ಕಾರ ಆಗಿರಬಹುದು ಸನ್ಮಾನ್ಯ ಸಿದ್ದರಾಮಯ್ಯನವರಾಗಿರಬಹುದು ಎಲ್ಲಾ ಸಮಾಜಕ್ಕೆ ಎಲ್ಲಾ ಸಮಾನವಾದ ಬೆಲೆ ಕೊಡಬೇಕೆಂದು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದ್ದಾರೆ, ಸಮುದಾಯ ಭವನವನ್ನು ನಿರ್ಮಾಣ ಮಾಡಲು ಕಾರ್ಯರೂಪಕ್ಕೆ ತರಲು ನಿರ್ಧಾರ ಮಾಡಿದ್ದಾರೆ ಎಂದರು ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಎಲ್ಲಾ ಮುಖಂಡರುಗಳು ಭಾಗವಹಿಸಿದ್ದರು ಕಾರ್ಯಕ್ರಮ ಯಶಸ್ವಿಯಾಗಿ ಯಶಸ್ವಿಯಾಗಿ ಜರುಗಿತು.
