ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಭಾಸ್ಕರ ಪತ್ರಿಕೆ
0

ತಿಪಟೂರು: ದಿನಾಂಕ 16.11.2025ನೇ ಭಾನುವಾರ ಮಧ್ಯಾಹ್ನ 2 ಗಂಟೆಗೆ ಭಾಸ್ಕರ್ ಪತ್ರಿಕೆ ಕಚೇರಿ ಆವರಣ ಹಾಸನ ವೃತ್ತ ತಿಪಟೂರು ಇಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಶುಭ ವಿಶ್ವ ಕರ್ಮ ಖಜಾಂಚಿ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ ಇದರ ಅಧ್ಯಕ್ಷತೆಯನ್ನು ಭಾಸ್ಕರ್ ಪತ್ರಿಕೆ ಸಂಪಾದಕರು ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ಜಿಲ್ಲಾ ಗೌರವಾಧ್ಯಕ್ಷರಾದ ಡಾ. ಭಾಸ್ಕರ್ ಅಧ್ಯಕ್ಷತೆಯನ್ನು ವಹಿಸಲಿದ್ದು, ಗೌರವಾಧ್ಯಕ್ಷರಾದ ಗಣೇಶ್ ಹಿರಿಯ ಪತ್ರಕರ್ತರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಮುಖ್ಯ ಅತಿಥಿಗಳು ಕಿಬ್ನಳ್ಳಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರೈತ ಕವಿ ಡಾಕ್ಟರ್ ಶಂಕ್ರಪ್ಪ ಬಳ್ಳೆ ಕಟ್ಟೆ ಹಿರಿಯ ಪತ್ರಕರ್ತರು , ಉಪನ್ಯಾಸ : ಲತಾ ಮಣಿ ಶಿಕ್ಷಕಿ ನಡೆಸಿಕೊಡಲಿದ್ದಾರೆ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಅಭಿಮಾನಿಗಳು ಎಲ್ಲಾ ಪತ್ರಕರ್ತರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷರಾದ ಟಿ ರಾಜು ಬೆಣ್ಣೆನಹಳ್ಳಿ ಪತ್ರಿಕಾ ಹೇಳಿಕೆ ಕೊಟ್ಟಿದ್ದಾರೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*