ಉಸಿರು ಚೆಲ್ಲಿದ "ವೃಕ್ಷಮಾತೆ"
ಮರಗಳನ್ನೇ ತಮ್ಮ ಮಕ್ಕಳಂತೆ ಸಾಕಿ ಸಲಹಿದ ʻವೃಕ್ಷಮಾತೆʼ ಎಂದೇ ಪ್ರಸಿದ್ಧರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ನಿಧನರಾದ ಸುದ್ದಿ ಅತೀವ ದುಖಃ ನೀಡಿದೆ. ನಿಸರ್ಗ ಪ್ರೀತಿಯ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿದ್ದ ಅವರ ಅಸಾಮಾನ್ಯ ಬದುಕು ಮತ್ತು ಪರಿಸರಕ್ಕೆ ಅವರ ಕೊಡುಗೆ ಚಿರಸ್ಮರಣೀಯ. ವೃಕ್ಷಮಾತೆ ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಾಸ್ಕರ್ ಪತ್ರಿಕಾ ಬಳಗದಿಂದ ಪ್ರಾರ್ಥಿಸುತ್ತೇನೆ.
ಅವರ ಕಾರ್ಯ ಸದಾ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿ ಉಳಿಯಲಿದೆ.
ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ.
ಹಿರಿಯ ಪತ್ರಕರ್ತರಾದ ಭಾಸ್ಕರ್.ಮಂಜು ಗುರುಗದಹಳ್ಳಿ. ಮಂಜುನಾಥ್ ಡಿ.
ಮೋಹನ್ ಕೆರಗೋಡಿ.
ಕಿರಣ್. ಕುಮಾರ್ ಮಾದಿಹಳ್ಳಿ ಸೇರಿದಂತೆ ಪ್ರಮುಖರು ಸಂತಾಪ ಸೂಚಿದರು.
ವರದಿ: ಮಂಜು ಗುರುಗದಹಳ್ಳಿ
