
ಪಾವಗಡ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಧುಗಿರಿ ಇವರ ವತಿಯಿಂದ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಮಂಗಳವಾರ ಏರ್ಪಡಿಸಿದ ಜಿಲ್ಲಾ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪಾವಗಡ ಪಟ್ಟಣದ ಹೆಸರಾಂತ ಜ್ಞಾನ ಭೋದಿನಿ ಪ್ರೌಢ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಏಕೇಶ್ ಎಸ್. ಮತ್ತು ಈಶ್ವರ್ ರವರು ವಿಜ್ಞಾನ ಶಿಕ್ಷಕರಾದ ಗುಣತೇಜ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಅಡೆತಡೆಗಳನ್ನು ತಡೆಯುವ ರೋಬೋಟಿಕ್ ಕಾರ್ (OBSTACLE AVOIDING ROBOTIC CAR)ನ್ನು ಪ್ರದರ್ಶಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆ:

ಮಧುಗಿರಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( DIET) ಮಧುಗಿರಿ ರವರ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯ 10 ನೇ ತರಗತಿಯ ವಿದ್ಯಾರ್ಥಿ ಹೃತಿಕ್ ಹೆಚ್. ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಹಾಗೆಯೇ ಶಿಕ್ಷಕರ ವಿಭಾಗದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜ್ಞಾನ ಶಿಕ್ಷಕರು ಮತ್ತು ಪ್ರಭಾರಿ ಮುಖ್ಯ ಶಿಕ್ಷಕರಾದ ರೇಣುಕರಾಜ್. ಜಿ.ಹೆಚ್ ರವರ ಮಾದರಿಯು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟದ ಸ್ಪರ್ಧೆಯು ಇದೇ ತಿಂಗಳಲ್ಲಿ ಧಾರವಾಡದಲ್ಲಿ ನಡೆಯಲಿದೆ. ವಿಜೇತ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರೇಣುಕಮ್ಮ, ಎಮ್. ಬಿ.ಆರ್.ಸಿ ವೆಂಕಟೇಶ್ ಜಿ., ಎಸ್.ಡಿ.ಎಂ.ಅಧ್ಯಕ್ಷರಾದ ಪ್ರೇಮ್ ಕುಮಾರ್, ಉಪಾಧ್ಯಕ್ಷರಾದ ಕವಿತಮ್ಮ ಎಸ್.ಡಿ.ಎಂ.ಸಿ ಸದಸ್ಯರು, ಸಹಶಿಕ್ಷಕರಾದ ಹನುಮೇಶ್ ಎನ್., ಮೋಹನ್ ಕುಮಾರ್ ಜಿ.ಕೆ., ಕುಮಾರ್ ಎಸ್. , ಅಭಿಷೇಕ್.ಎಂ.ವಿ., ಶಿಕ್ಷಕಿಯರಾದ ವಿಮಲಾ ಆರ್., ರಶ್ಮಿ ಸಿ.ಎಸ್., ಮಾನಸ, ಶ್ರೀಲಕ್ಷ್ಮೀ ಮತ್ತು ಸಮಸ್ತ ಪೋಷಕರು ಅಭಿನಂದಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
The post ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ appeared first on nammatumakuru.
from nammatumakuru https://ift.tt/da4WY2q
