ಮೈಸೂರು: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಭಾವುರ್ಸಾ(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಮೃತರ ಪತ್ನಿ ವೀಣಾ ಅವರು ಎರಡು ವರ್ಷದ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕೆ.ಆರ್. ಆಸ್ಪತ್ರೆಯ ಶವಾಗಾರದಲ್ಲಿ ಸೋಮವಾರ ಬೆಳಗ್ಗೆ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆಯ ನಂತರ ಅಪರಾಹ್ನ 12ಗಂಟೆ ನಂತರ ಚಾಮುಂಡಿಬೆಟ್ಟದ ತಪ್ಪಲಿನ ಸುಡುವ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ರಾಜಕುಮಾರ್ ಅವರು ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರ್, ಕನ್ನಡಪ್ರಭ, ಸಂಕ್ರಾಂತಿ, ಸಂಯುಕ್ತ ಕರ್ನಾಟಕ, ರಾಜ್ಯ ಧರ್ಮ, ಜನಮನ ಸೇರಿದಂತೆ ವಿವಿಧ ಪತ್ರಿಕೆಯಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿದರು. ಇವರ ಅಗಲಿಕೆಗೆ ಭಾಸ್ಕರ ಪತ್ರಿಕೆಯ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಭಾಸ್ಕರ್ ಸಂತಾಪ ಸೂಚಿಸಿದ್ದಾರೆ.
ಪತ್ರಕರ್ತ ರಾಜ್‌ಕುಮಾರ್ ಭಾವುಸಾರ್ ನಿಧನ
ಜನವರಿ 06, 2026
0

Tags