ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಲಿಂಕ್ ಲೈನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 25ರಂದು ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಏಪ್ರಿಲ್ 25ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ. ಕ್ಯಾತ್ಸಂದ್ರ ಉಪವಿಭಾಗದ ವ್ಯಾಪ್ತಿಗೆ ಬರುವ ಊರ್ಡಿಗೆರೆ, ಮೈದಾಳ, ಸೀತಕಲ್ಲು ಮತ್ತು ಅರೇಗುಜ್ಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ.
ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರು ಬೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
The post ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ appeared first on nammatumakuru.
from nammatumakuru https://ift.tt/lSL3MZi
